HomeKarnatakaBIG NEWS: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಿಸಿದ YSV ದತ್ತಾ

BIG NEWS: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಘೋಷಿಸಿದ YSV ದತ್ತಾ

ಚಿಕ್ಕಮಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿದ ವೈ.ಎಸ್.ವಿ. ದತ್ತಾ, ಅಭಿಮಾನಿಗಳು, ಬೆಂಬಲಿಗರ ಜೊತೆ ಚರ್ಚಿಸಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದು ಮುಗಿದ ಕಥೆ, ಹಣ, ಜಾತಿ ಮೇಲೆ ಅಭ್ಯರ್ಥಿ ಆಯ್ಕೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ʼಟವೆಲ್ʼ ಗುರುತಿನಿಂದ ಸ್ಪರ್ಧೆ ಮಾಡುತ್ತಿದ್ದು, ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು. ಇದೇ ವೇಳೆ ಚುನವಣಾ ಖರ್ಚಿಗಾಗಿ ಹಣ ಸಂಗ್ರಹಿಸಿದ ದತ್ತಾ, ಸಮಾವೇಶದಲ್ಲಿಯೇ ಟವೆಲ್ ಹಾಸಿ ಹಣ ಸಂಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular