HomeKarnatakaBIG NEWS: ಸಂಜೆಯೊಳಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

BIG NEWS: ಸಂಜೆಯೊಳಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಿಎಂ ಯಡಿಯೂರಪ್ಪ ಮಾಹಿತಿ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಸಮಯವಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ನಿಟ್ಟಿನಲ್ಲಿ ಕೇಂದ್ರ ನಾಯಕರು ಸಭೆ ಮೇಲೆ ಸಭೆ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನವದೆಹಲಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆಯೊಳಗಾಗಿ ಬಿಡುಗಡೆಯಾಗಲಿದೆ. ಅಭ್ಯರ್ಥಿ ಪಟ್ಟಿ ಬಿಡುಗಡೆಗೂ ಮುನ್ನ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಟ್ಟಾರೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಟಿಕೆಟ್ ಆಕಾಂಕ್ಷಿಗಳಲ್ಲಿ ಎದೆಬಡಿತ ಜೋರಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular