HomeKarnatakaBIG NEWS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಡಿ.ಕೆ.ಶಿವಕುಮಾರ್

BIG NEWS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಡಿ.ಕೆ.ಶಿವಕುಮಾರ್

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಗೆಲುವಿಗಾಗಿ ರಾಜಕೀಯ ನಾಯಕರು ದೇವರ ಮೊರೆ ಹೋಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೆಂಪಲ್ ರನ್ ಆರಂಭಿಸಿದ್ದಾರೆ.

ಮೊನ್ನೆಯಷ್ಟೇ ಕಾಳಹಸ್ತಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದ ಡಿ.ಕೆ.ಶಿವಕುಮಾರ್ ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶೃಂಗೇರಿ ಭೇಟಿ ಬಳಿಕ ಧರ್ಮರ್ಸ್ಥಳಕ್ಕೆ ಡಿ.ಕೆ.ಶಿವಕುಮಾರ್ ತೆರಳುವವರಿದ್ದರು. ಆದರೆ ನವದೆಹಲಿಯಲ್ಲಿ ಕಾಂಗ್ರೆಸ್ ಸಭೆ ಕರೆದ ಹಿನ್ನೆಲೆಯಲ್ಲಿ ಧರ್ಮಸ್ಥಳ ಪ್ರವಾಸ ರದ್ದುಗೊಳಿಸಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular