ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಮತ್ತೆ 5,800ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 5,880 ಜನರಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟಿದೆ.
ದೇಶದಲ್ಲಿ ಈವರೆಗೆ 5,30,979 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 35,199 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,96,318 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 00,205 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,23,527 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 85,076 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.