HomeKarnatakaಯಾವುದೇ ಕಾರಣಕ್ಕೂ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್...

ಯಾವುದೇ ಕಾರಣಕ್ಕೂ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆ

ಕಾಂಗ್ರೆಸ್ ಪಕ್ಷದೊಂದಿಗೆ ಈಗಾಗಲೇ ಗುರುತಿಸಿಕೊಂಡಿರುವ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ರಾಜ್ಯದಲ್ಲಿ ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆಪರೇಷನ್ ಕಮಲದ ಕಾರಣಕ್ಕಾಗಿ ಅವರು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದಕ್ಕೆ ನಾನು ಪ್ರಾಯಶ್ಚಿತ ಮಾಡಿಕೊಂಡಿದ್ದೇನೆ. ಅವರ ಭ್ರಷ್ಟಾಚಾರಕ್ಕೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಎಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಭವಿಷ್ಯವಿದೆ ಎಂದು ಅಭಿಪ್ರಾಯ ಪಟ್ಟರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular