HomeKarnatakaBIG NEWS: ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

BIG NEWS: ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವೇಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಲಿ ಕಾಣಸಿಗದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಕುರಿ ಚರ್ಬಿ ತಿಂದು ತಿಂದು ಸಿದ್ದರಾಮಯ್ಯನವರಿಗೆ ಕೊಬ್ಬು ಜಾಸ್ತಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿದ್ದರು. ಘನತೆಯಿಂದ ಮಾತನಾಡುವುದನ್ನು ಕಲಿಯಬೇಕು. ಹುಲಿ ಯೋಜನೆಗೆ 50 ವರ್ಷ ತುಂಬಿದ ಕಾರಣಕ್ಕೆ ಪ್ರಧಾನಿ ಮೋದಿ ಬಂಡಿಪುರಕ್ಕೆ ಬಂದು ಹೋಗಿದ್ದಾರೆ. ಬೇಸಿಗೆ ಇರುವ ಕಾರಣಕ್ಕೆ ಹುಲಿ ಕಾಣಿಸಿಲ್ಲ. ಅದಕ್ಕೂ ಸಿದ್ದರಾಮಯ್ಯನವರು ಕೊಂಕು ಮಾತನಾಡುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular