HomeKarnatakaBIG NEWS: ಅಮುಲ್ ಕರ್ನಾಟಕ ಪ್ರವೇಶಿಸಲು ವಿರೋಧ; 'ಕರವೇ' ಯಿಂದ ಬೃಹತ್ ಪ್ರತಿಭಟನೆ

BIG NEWS: ಅಮುಲ್ ಕರ್ನಾಟಕ ಪ್ರವೇಶಿಸಲು ವಿರೋಧ; ‘ಕರವೇ’ ಯಿಂದ ಬೃಹತ್ ಪ್ರತಿಭಟನೆ

ಗುಜರಾತಿನ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಬೆಂಗಳೂರಿನ ಮೈಸೂರು ಸರ್ಕಲ್ ಬಳಿ ಈ ಪ್ರತಿಭಟನೆ ನಡೆದಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ನೀಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅಮುಲ್ ಉತ್ಪನ್ನಗಳನ್ನು ರಾಜ್ಯದ ಜನತೆ ಬಹಿಷ್ಕರಿಸಬೇಕು. ನಮ್ಮದೇ ಆದ ನಂದಿನಿ ಉತ್ಪನ್ನಗಳನ್ನು ಬೆಂಬಲಿಸಬೇಕು ಎಂದು ಪ್ರತಿಭಟನಾಕಾರರು ಹೇಳಿದ್ದು, ಅಮುಲ್ ಹಾಲು ಮಾರಾಟಕ್ಕೆ ಮುಂದಾದರೆ ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular