
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಸುಧಾಕರ್, ಬಿಜೆಪಿ ಚುನಾವಣಾ ಪ್ರಣಾಳಿಕೆ ಸಿದ್ಧ ಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ವಿಭಾಗ, ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಭೆ ನಡೆದಿದೆ ಎಂದರು.
ರಾಜ್ಯ ಹಾಗೂ ದೇಶಕ್ಕೆ ಬಿಜೆಪಿ ಪ್ರಣಾಳಿಕೆ ಮಾದರಿಯಾಗಲಿದೆ. ಹೊಸತನ, ಬದುಕು ಕಟ್ಟಿಕೊಡುವ ರೀತಿಯಲ್ಲಿ ಪ್ರಣಾಳಿಕೆ ಇರಲಿದೆ. ವಾರದೊಳಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

