HomeAgricultureBIG NEWS: ರೈತ ಮಕ್ಕಳನ್ನು ಮದುವೆಯಾದರೆ 2 ಲಕ್ಷ ರೂ. ಅನುದಾನ; ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

BIG NEWS: ರೈತ ಮಕ್ಕಳನ್ನು ಮದುವೆಯಾದರೆ 2 ಲಕ್ಷ ರೂ. ಅನುದಾನ; ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂಪಾಯಿ ಅನುದಾನ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

ಕೋಲಾರದ ಮುಳಬಾಗಿಲು ತಾಲೂಕಿನ ಶಿನಗೇನಹಳ್ಳಿ ಸಮಾವೇಶದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಇಂದು ರೈತರ ಮಕ್ಕಳನ್ನು ವಿವಾಹವಾಗಲು ಯಾರೂ ಹೆಣ್ಣು ಕೊಡುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಹಾಗಾಗಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ನೀಡಲಾಗುವುದು ಎಂದರು.

ರಾಜ್ಯದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ. ಮೀಸಲಾತಿ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಕುಮರಸ್ವಾಮಿ ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular