ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಏಪ್ರಿಲ್ 15ರಿಂದ 30ರವರೆಗೆ ಆನ್ಲೈನ್ ಉದ್ಯೋಗ ಮೇಳ ಆಯೋಜಿಸಿದೆ.
ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರೊಫೈಲ್ ಇನ್ ಕಂಪನಿ ಸಹಯೋಗದಲ್ಲಿ ಆಯೋಜಿಸಿರುವ ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಕಂಪನಿಗಳಿಂದ 2000ಕ್ಕೂ ಅಧಿಕ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ವಾರ್ಷಿಕ 3 ಲಕ್ಷ ರೂ.ನಿಂದ 6 ಲಕ್ಷ ರೂ.ವರೆಗೆ ವೇತನದ ಪ್ಯಾಕೇಜ್ ದೊರೆಯುವ ನಿರೀಕ್ಷೆ. ಉದ್ಯೋಗ ಮೇಳದಲ್ಲಿ ಎಂಕಾಂ, ಬಿಕಾಂ, ಎಂಬಿಎ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ ಇದೆ ಎಂದು ತಿಳಿಸಿದ್ದಾರೆ.
ಉದ್ಯೋಗ ಆಕಾಂಕ್ಷಿಗಳು ಮೊಬೈಲ್ ನಲ್ಲಿ ಪ್ರೊಫೈಲ್ ಇನ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು. ದಾಖಲೆ ಪರಿಶೀಲಿಸಿ ಅರ್ಹರಿಗೆ ಸಂದರ್ಶನ ನಡೆಸಲಾಗುತ್ತದೆ. ವಿವರಗಳಿಗಾಗಿ 95133 73737 ಸಂಪರ್ಕಿಸಬಹುದಾಗಿದೆ ಎಂದು ಪ್ರೊಫೈಲ್ ಇನ್ ಕಂಪನಿಯ ವೆಂಕಟೇಶ್ ಮಾಹಿತಿ ನೀಡಿದ್ದಾರೆ.