HomeKarnatakaBIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ; ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಶಾಸಕರು

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾತ್ರ ಇನ್ನೂ ಕಗ್ಗಂಟಾಗಿ ಉಳಿದಿದೆ. ಈ ನಡುವೆ ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ನಿನ್ನೆ ರಾತ್ರಿ ದೆಹಲಿಯಿಂದ ಆಗಮಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಶಾಸಕರು ಭೇಟಿಯಾಗಿದ್ದಾರೆ. ಶಾಸಕರಾದ ರಾಮಣ್ಣ ಲಮಾಣಿ, ಮುದ್ನಾಳ್, ಸುರೇಶ್ ಕುಮಾರ್ ಸೇರಿದಂತೆ ಹಲವು ಶಾಸಕರು ಯಡಿಯೂರಪ್ಪ ಭೇಟಿಯಾಗಿ ಟಿಕೆಟ್ ವಿಚಾರವಾಗಿ ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular