HomeKarnatakaBIG BREAKING: ಚುನಾವಣಾ ರಾಜಕೀಯದಿಂದ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಣೆ; ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ...

BIG BREAKING: ಚುನಾವಣಾ ರಾಜಕೀಯದಿಂದ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಣೆ; ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕನ ನಿರ್ಧಾರ

ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಈಶ್ವರಪ್ಪ ಅವರ ಈ ದಿಢೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ. ತಮ್ಮ ಪುತ್ರ ಕಾಂತೇಶ್ ಅವರಿಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ಕೊಡಿಸಲು ಈ ನಿರ್ಧಾರ ಕೈಗೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದ ಅವರು ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದು ಕಾರ್ಯಕರ್ತರಿಗೆ ಶಾಕ್ ಆದಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತಿದ್ದೇನೆ. ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಿಸಬೇಡಿ ಎಂದು ಹೇಳಿದ್ದಾರೆ.

ಬೂತ್ ಮಟ್ಟದಿಂದ ಉಪ ಮುಖ್ಯಮಂತ್ರಿ ಹುದ್ದೆಯವರೆಗೆ ಬಿಜೆಪಿ ನನಗೆ ಗೌರವದ ಸ್ಥಾನಮಾನಗಳನ್ನು ನೀಡಿದ್ದು ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular