BREAKING: ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಚಿವ, ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಚುನಾವಣಾ ರಾಜಕೀಯಕ್ಕೆ ಕೆ.ಎಸ್. ಈಶ್ವರಪ್ಪ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ಈ ಬಗ್ಗೆ ತಿಳಿಸಿದ್ದಾರೆ. ಇನ್ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ

ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿಗೆ ನಿರ್ಧರಿಸಿದ್ದು, ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ವಿಧಾನಸಭಾ ಚುನಾವಣೆಗೆ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಿಸಬಾರದು ಎಂದು ವಿನಂತಿ. ಕಳೆದ 40 ವರ್ಷಗಳಿಂದ ಪಕ್ಷದಲ್ಲಿ ಅನೇಕ ಸ್ಥಾನಮಾನ ನೀಡಿದ್ದಕ್ಕೆ ಬಿಜೆಪಿಗೆ ಧನ್ಯವಾದಗಳು ಎಂದು ಈಶ್ವರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read