
ವಯಸ್ಸಿನ ಕಾರಣಕ್ಕೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದ ಬಿಜೆಪಿ ಹೈಕಮಾಂಡ್ ಇದೇ ಸಂದರ್ಭದಲ್ಲಿ ತಮ್ಮ ಚುನಾವಣಾ ರಾಜಕೀಯ ನಿವೃತ್ತಿಯನ್ನೂ ಸಹ ಘೋಷಿಸುವಂತೆ ಮಾಡಲಾಗಿತ್ತು. ಅದಾದ ಬಳಿಕ ಎಸ್.ಎ. ರವೀಂದ್ರನಾಥ್ ನಿವೃತ್ತಿ ಘೋಷಿಸಿದ್ದರು.
ನಂತರ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಹ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಇಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ದಿಢೀರ್ ಆಗಿ ತಮ್ಮ ಚುನಾವಣಾ ರಾಜಕೀಯದಿಂದ ನಿವೃತ್ತಿ ನಿರ್ಧಾರವನ್ನು ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಷ್ಟು ಹಿರಿಯ ನಾಯಕರು ಇದೇ ನಡೆಯನ್ನು ಅನುಸರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ವಿಧಾನಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತಿದ್ದು, ಹೀಗಾಗಿ ಹಿರಿಯ ನಾಯಕರು ಸ್ವಯಂ ಆಗಿ ಚುನಾವಣಾ ರಾಜಕೀಯ ಘೋಷಣೆ ಮಾಡುವಂತೆ ಸೂಚನೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.

