HomeKarnatakaBIG NEWS: ಸ್ವ ಇಚ್ಛೆಯಿಂದಲೇ ಈ ನಿರ್ಧಾರ; ನಿವೃತ್ತಿ ಬಳಿಕ ಕೆ.ಎಸ್. ಈಶ್ವರಪ್ಪ ಮೊದಲ ಮಾತು

BIG NEWS: ಸ್ವ ಇಚ್ಛೆಯಿಂದಲೇ ಈ ನಿರ್ಧಾರ; ನಿವೃತ್ತಿ ಬಳಿಕ ಕೆ.ಎಸ್. ಈಶ್ವರಪ್ಪ ಮೊದಲ ಮಾತು

ಶಿವಮೊಗ್ಗ: ನಾನು ಸ್ವ ಇಚ್ಛೆಯಿಂದ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ರಾಜಕೀಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದ್ದು, ನಾನು ಸ್ವ ಇಚ್ಛೆಯಿಂದ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ. ನನಗೆ ಯಾವುದೇ ಒತ್ತಡವೂ ಇರಲಿಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಇಂದು ಬೆಳಿಗ್ಗೆ ಪತ್ರದ ಮೂಲಕ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದೇನೆ. ನನ್ನ ಪತ್ರವನ್ನು ಕೇಂದ್ರ ನಾಯಕರು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ಬೂತ್ ಮಟ್ಟದಿಂದ ಡಿಸಿಎಂ ಹುದ್ದೆವರೆಗೂ ನಾನು ಹಲವು ಜವಾಬ್ದಾರಿ ನಿಭಾಯಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ. ಈ ಬಾರಿ ನಮ್ಮ ಟಾರ್ಗೆಟ್ ಸಂಪೂರ್ಣ ಬಹುಮತದಿಂದ ಬಿಜೆಪಿ ಸರ್ಕಾರ ರಚನೆ ಮಾಡಬೇಕು ಎಂಬುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಕ್ಷೇತ್ರಕ್ಕೆ ಮೂವರು ಅಭ್ಯರ್ಥಿಗಳ ಹೆಸರು ಹೇಳಿದ್ದಾರೆ ಅಂತಿಮವಾಗಿ ಅಭ್ಯರ್ಥಿ ಆಯ್ಕೆ ವರಿಷ್ಠರಿಗೆ ಬಿಟ್ಟದ್ದು, ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular