HomeKarnatakaBIG NEWS: ಪುತ್ರನಿಗೆ ಪಟ್ಟಕಟ್ಟಲು ಸಜ್ಜಾದ ಸಚಿವ ಆನಂದ್ ಸಿಂಗ್

BIG NEWS: ಪುತ್ರನಿಗೆ ಪಟ್ಟಕಟ್ಟಲು ಸಜ್ಜಾದ ಸಚಿವ ಆನಂದ್ ಸಿಂಗ್

ವಿಜಯನಗರ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಸಚಿವ ಆನಂದ್ ಸಿಂಗ್ ಪುತ್ರನಿಗೆ ಪಟ್ಟಕಟ್ಟಲು ಮುಂದಾಗಿದ್ದಾರೆ.

ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಚಿವರುಗಳು ತಮ್ಮ ಮಕ್ಕಳಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಪಟ್ಟು ಹಿಡಿದಿದ್ದಾರೆ. ಸಚಿವ ವಿ.ಸೋಮಣ್ಣ, ಸಂಸದ ಸಿದ್ದೇಶ್ವರ್ ಬೆನ್ನಲ್ಲೇ ಇದೀಗ ಸಚಿವ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ವರಿಷ್ಠರಿಗೆ ಮನವಿ ಮಾಡಿರುವ ಆನಂದ್ ಸಿಂಗ್ ಪುತ್ರನಿಗಾಗಿ ಕ್ಷೇತ್ರ ತ್ಯಾಗಕ್ಕೂ ಮುಂದಾಗಿದ್ದಾರೆ ಎನ್ನಲಾಗಿದೆ. ಪ್ರಭಾವ ಇರುವಾಗಲೇ ಪುತ್ರನಿಗೆ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸಿರುವ ಸಚಿವರು, ವಿಜಯನಗರ ಕ್ಷೇತ್ರದಿಂದ ಸಿದ್ಧಾರ್ಥ್ ಗೆ ಟಿಕೆಟ್ ಕೇಳಿದ್ದಾರೆ. ಇನ್ನೊಂದೆಡೆ ಆನಂದ್ ಸಿಂಗ್ ಪುತ್ರನಿಂದ ಕ್ಷೇತ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕೂಡ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular