ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ರಾಣೇಬೆನ್ನೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಅರುಣ್ ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಆರ್. ಶಂಕರ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಪಕ್ಷೇತರರಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.