HomeKarnatakaBIG NEWS: ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರೂ ಇದ್ದಾರೆ, ಅವರನ್ನು ಸೀನಿಯರ್ಸ್ ಅನ್ನಲ್ವಾ...? ಜಗದೀಶ್...

BIG NEWS: ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರೂ ಇದ್ದಾರೆ, ಅವರನ್ನು ಸೀನಿಯರ್ಸ್ ಅನ್ನಲ್ವಾ…? ಜಗದೀಶ್ ಶೆಟ್ಟರ್ ಪ್ರಶ್ನೆ

ಹುಬ್ಬಳ್ಳಿ: ಬಿಜೆಪಿ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗದ ಬೆನ್ನಲ್ಲೇ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದ ಜಗದೀಶ್ ಶೆಟ್ಟರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿದೆ. ದೆಹಲಿಗೆ ತೆರಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ರಾಷ್ಟ್ರೀಯ ನಾಯಕರು ದೆಹಲಿಗೆ ಕರೆದಿದ್ದಾರೆ. ಹೈಕಮಾಂಡ್ ಜೊತೆ ಮಾತುಕತೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಮಂತ್ರಿ ಸ್ಥಾನ ಸಿಗದಿದ್ದರೂ 2 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಕೆಲಸ ಮಾಡುವುದಕ್ಕೆ ಮಂತ್ರಿ ಸ್ಥಾನವೇ ಬೇಕೆಂದಿಲ್ಲ. ನನಗೆ ಯಾವುದೇ ಸ್ಥಾನಮಾನ ನೀಡದಿದ್ದರೂ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ನಾಯಕರಿಂದ ಪಾಸಿಟಿವ್ ರೆಸ್ಪಾನ್ಸ್ ಬರಬಹುದು. ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕಾರಣದಲ್ಲಿ ಗೌರವಯುತವಾಗಿ ನಿವೃತ್ತಿಯಾಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ಬಿಜೆಪಿ ಟಿಕೆಟ್ ಸಿಕ್ಕವರಲ್ಲಿ 75-76 ವರ್ಷದವರೂ ಇದ್ದಾರೆ. ಅವರನ್ನು ಸೀನಿಯರ್ಸ್ ಎನ್ನಲ್ವಾ? ರಾಷ್ಟ್ರೀಯ ನಾಯಕರ ಭಾವನೆ ಮೇಲೆ ನನ್ನ ನಿರ್ಧಾರವಾಗಲಿದೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular