HomeKarnatakaBIG NEWS: ಇದು ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಎಂದು ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್

BIG NEWS: ಇದು ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಎಂದು ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕನಕಪುರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಸಚಿವ ಆರ್.ಅಶೋಕ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜಕೀಯ ಎನ್ನುವುದು ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಎಂದು ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಆರ್. ಅಶೋಕ್ ಈ ಬಾರಿ ಪದ್ಮನಾಭನಗರದಿಂದಲೂ ಸೋಲುತ್ತಾರೆ. ಕನಕಪುರದಿಂದಲೂ ಸೋಲುತ್ತಾರೆ. ರಾಜಕೀಯ ಎನ್ನುವುದು ಚೆಸ್ ಗೇಮ್ ಇದ್ದಂತೆ ಎಂದರು.

ಆಟ ಆಡ್ತಿದ್ದಾರೆ, ಆಡಲಿ ಬಿಡಿ. ನನಗೆ ಹೋರಾಟ ಹೊಸದೇನೂ ಅಲ್ಲ, ಇಡೀ ಜೀವನ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಯಾರ ಹತ್ತಿರವೂ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪದ್ಮನಾಭನಗರದಿಂದ ಡಿ.ಕೆ.ಸುರೇಶ್ ಸ್ಪರ್ಧೆಗೆ ಒತ್ತಡವಿದೆ. ಆದರೆ ಈಗಾಗಲೇ ಪದ್ಮನಾಭನಗರ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ರಘುನಾಥ್ ನಾಯ್ಡು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular