HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 7000ಕ್ಕೂ ಹೆಚ್ಚು ಜನರಲ್ಲಿ...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನದಲ್ಲಿ 7000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 7000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 7,830 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದು ಕಳೆದ 223 ದಿನಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ.

ದೇಶದಲ್ಲಿ ಈವರೆಗೆ 5,31,016 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 40,215 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,04,771 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,441 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,24,326 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,14,242 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular