
ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಲ ವಿಚಾರಗಳನ್ನು ನಾವು ಬಹಿರಂಗ ಪಡಿಸಲು ಆಗಲ್ಲ. ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕ್ಷೇತ್ರದ ಜನ ಸಿದ್ಧಾರ್ಥ್ ಗೆ ಟಿಕೆಟ್ ಸಿಕ್ಕಿದ ಉತ್ಸಾಹದಲ್ಲಿದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಅಳೆದು ತೂಗಿ ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ ಮಾಡೆಲ್ ಜಾರಿ ಬಗ್ಗೆಯೂ ನನಗೆ ಗೊತ್ತಿಲ್ಲ. ಮಾದರಿ ಸರ್ಕಾರ ಮಾಡಲು ಹೊಸಬರಿಗೆ ಟಿಕೆಟ್ ನೀಡಿದ್ದಾರೆ ಎಂದು ತಿಳಿಸಿದರು.

