HomeKarnatakaBIG NEWS: ಕಮಲ ಪಾಳಯದಲ್ಲಿ ಬಂಡಾಯದ ಬೆಂಕಿ; ಬಿಜೆಪಿ ತೊರೆಯಲು ಸಜ್ಜಾದ್ರಾ ಶಾಸಕ ಅನಿಲ್ ಬೆನಕೆ....?

BIG NEWS: ಕಮಲ ಪಾಳಯದಲ್ಲಿ ಬಂಡಾಯದ ಬೆಂಕಿ; ಬಿಜೆಪಿ ತೊರೆಯಲು ಸಜ್ಜಾದ್ರಾ ಶಾಸಕ ಅನಿಲ್ ಬೆನಕೆ….?

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಆರಂಭವಾಗಿದೆ. ಬಿಜೆಪಿ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ಮಾಜಿ ಡಿಸಿಎಂ, ಎಂ ಎಲ್ ಸಿ ಲಕ್ಷ್ಮಣ ಸವದಿ ಬೆನ್ನಲ್ಲೇ ಇದೀಗ ಮತ್ತೋರ್ವ ಶಾಸಕ ಬಿಜೆಪಿ ತೊರೆಯಲು ಮುಂದಾಗಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ಕೈತಪ್ಪಿದವರು ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದು, ರಾಜೀನಾಮೆಗೆ ನಿರ್ಧರಿಸಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಶಾಸಕ ಅನಿಲ್ ಬೆನಕೆ ಪಕ್ಷಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದ ಅನಿಲ್ ಬೆನಕೆಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕರು ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular