HomeKarnatakaBIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಕಮಲ ಪಾಳಯದಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ.

ಕುಂದಗೋಳ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಬೆಂಬಲಿಗರ ಸಭೆ ಬಳಿಕ ಮಾತನಾಡಿದ ಚಿಕ್ಕನಗೌಡರ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸಿದ್ದಾರೆ. ಇನ್ನು ನಾವೆಲ್ಲ ಯಾವ ಲೆಕ್ಕ? ನಾನು ಬಿಜೆಪಿಗೆ ರಾಜೀನಾಮೆ ಕೊಡಲು ತಯಾರಾಗಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ. ಈಗಾಗಲೇ ಪತ್ರ ಬರೆದಿದ್ದೇನೆ. ನಾನ್ಯಾಕೆ ಕಾಂಗ್ರೆಸ್ ಗೆ ಸೇರ್ಪಡೆಯಾಗಬಾರದು. ನಾನು ಬಿಜೆಪಿಯಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular