HomeKarnatakaBIG NEWS: ವಿಧಾನ ಪರಿಷತ್ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ

BIG NEWS: ವಿಧಾನ ಪರಿಷತ್ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಸಾಲು ಸಾಲು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಮಾಜಿ ಸಚಿವ, ಪರಿಷತ್ ಸದಸ್ಯ ಆರ್. ಶಂಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಬೇಸರಗೊಂಡಿದ್ದ ಆರ್. ಶಂಕರ್, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಬೆಳಿಗ್ಗೆ ರಾಜೀನಾಮೆ ನೀಡಿದ್ದರು. ಇದೀಗ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಆರ್. ಶಂಕರ್ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ನಿನ್ನೆ ಘೋಷಣೆಯಾದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular