ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಇಂದಿನಿಂದ ಬಿ ಫಾರಂ ವಿತರಣೆ ಶುರುವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸ ಅಥವಾ ಪಕ್ಷದ ಕಚೇರಿಯಲ್ಲಿ ಹಂತ ಹಂತವಾಗಿ ಅಧಿಕೃತ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಲಾಗುತ್ತದೆ. ಕಾಂಗ್ರೆಸ್ ನಿಂದ ಈಗಾಗಲೇ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಮೊದಲ ದಿನ 30ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಲಿದ್ದು ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಂದ ಬಿ ಫಾರಂ ಪಡೆದುಕೊಳ್ಳಲು ಅಭ್ಯರ್ಥಿಗಳು ಕಾತರರಾಗಿದ್ದಾರೆ ಎನ್ನಲಾಗಿದೆ.