ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ನಟ ಸಂಜಯ್ ದತ್ ಗೆ ಗಾಯ

ಬೆಂಗಳೂರು: ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಾಯಕ ನಟರಾಗಿ ನಟಿಸಿರುವ ‘ಕೆಡಿ ದಿ ಡೆವಿಲ್’  ಸಿನಿಮಾ ಚಿತ್ರೀಕರಣದ ವೇಳೆ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆ ಪ್ರದೇಶದಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ಬಾಂಬ್ ಸಿಡಿತದಿಂದ ಸಂಜಯ್ ದತ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜಯ್ ದತ್ ಅವರ ಮೊಣಕೈ ಮತ್ತು ಮುಖದಲ್ಲಿ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಸಂಜು ಬಾಬಾ ಗಾಯಗೊಂಡಿದ್ದಾರೆ, ಆದರೆ ಇದು ಸಣ್ಣ ಅಪಘಾತವಾಗಿದೆ. ಯಾವುದೇ ಗಂಭೀರ ಹಾನಿ ಸಂಭವಿಸಿಲ್ಲ. ವಾಸ್ತವವಾಗಿ, ಶೀಘ್ರದಲ್ಲೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು ಮತ್ತು ಚಿತ್ರೀಕರಣವನ್ನು ಪುನರಾರಂಭಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read