ಉತ್ತರಪ್ರದೇಶದ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಗ್ಯಾಂಗ್ ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್ ಪುತ್ರ ಸೇರಿದಂತೆ ಇಬ್ಬರು ಪೊಲೀಸರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ. ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅತೀಕ್ ಅಹ್ಮದ್ ಪುತ್ರ ಅಸದ್ ಅಹ್ಮದ್ ಮತ್ತು ಗುಲಾಮ್ ಹತ್ಯೆಯಾಗಿದ್ದಾರೆ.
ಫೆಬ್ರವರಿ 24 ರಂದು ಪ್ರಯಾಗ್‌ರಾಜ್‌ನ ಮನೆಯ ಹೊರಗೆ ಗುಂಡು ಹಾರಿಸಿ ಉಮೇಶ್ ಪಾಲ್ ನನ್ನ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಅಸದ್ ಅಹ್ಮದ್ ಮತ್ತು ಗುಲಾಮ್ ತಲೆಗೆ 5 ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಪೊಲೀಸರ ಪ್ರಕಾರ ಆರೋಪಿಗಳು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆಯ ತಂಡದ ಮೇಲೆ ಗುಂಡು ಹಾರಿಸಿದರು. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಮೃತ ಆರೋಪಿಗಳಿಂದ ಅತ್ಯಾಧುನಿಕ ಆಯುಧಗಳು, ಹೊಸ ಸೆಲ್‌ಫೋನ್‌ಗಳು ಮತ್ತು ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಮೇಶ್ ಪಾಲ್ ಎಂಬ ವಕೀಲರು 2005ರಲ್ಲಿ ಬಿ ಎಸ್ ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಸಾಕ್ಷಿಯಾಗಿದ್ದರು. ಫೆಬ್ರವರಿ 24 ರಂದು, ಪ್ರಯಾಗ್‌ರಾಜ್‌ನಲ್ಲಿರುವ ಅವರ ಮನೆಯ ಹೊರಗೆ ದಾಳಿ ಮಾಡಿ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಸಮಾಜವಾದಿ ಪಕ್ಷದ ಮಾಜಿ ಸಂಸದರಾಗಿದ್ದ ಗ್ಯಾಂಗ್ ಸ್ಟರ್ ರಾಜಕಾರಣಿ ಅತೀಕ್ ಅಹ್ಮದ್ ಅಪಹರಣ ಪ್ರಕರಣದಲ್ಲಿ ಕಳೆದ ತಿಂಗಳು ಶಿಕ್ಷೆಗೊಳಗಾಗಿದ್ದರು.