HomeKarnatakaBREAKING NEWS: ಕಾರ್ ಅಪಘಾತದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ

BREAKING NEWS: ಕಾರ್ ಅಪಘಾತದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ

ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಕಲಬುರ್ಗಿಯ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಬಾಬುರಾವ್ ಚಿಂಚನಸೂರ್ ಅವರ ಕಾಲು ಮತ್ತು ಮುಖಕ್ಕೆ ಗಾಯಗಳಾಗಿದ್ದು, ಚುಂಚನಸೂರ್ ಕಲಬುರ್ಗಿಯ ಯುನೈಟೆಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕಾರ್ ಚಾಲಕ, ಗನ್ ಮ್ಯಾನ್ ಗೆ ಯಾವುದೇ ಅಪಾಯವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಚಿಂಚನಸೂರ್ ಯಾದಗಿರಿಯಿಂದ ಕಲಬುರಗಿಗೆ ತೆರಳುವಾಗ ಕಾರ್ ಅಪಘಾತಕ್ಕೀಡಾಗಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಕಾರ್ ಚಾಲಕ ನಿದ್ದೆಯ ಮಂಪರಿನಲ್ಲಿದ್ದು, ಗುಂಡಿಗೆ ಇಳಿದ ಕಾರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular