HomeKarnatakaಪರಮೇಶ್ವರ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

ಪರಮೇಶ್ವರ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಳಿಕ ಅವರು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಪಾಲಾಗಿದೆ.

ಬಿಜೆಪಿ ಮೊದಲ ಪಟ್ಟಿಯಲ್ಲಿಯೇ ಅವಕಾಶ ಪಡೆದುಕೊಂಡ ಬಿ.ವೈ. ವಿಜಯೇಂದ್ರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸುತ್ತಿದ್ದು, ಇದರ ಮಧ್ಯೆ ಶುಕ್ರವಾರದಂದು ಕುಣಿಗಲ್ ತಾಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ ಎದುರಾಗಿದ್ದು, ಆಗ ಅವರ ಕಾಲಿಗೆ ನಮಸ್ಕರಿಸಿ ಬಿ.ವೈ. ವಿಜಯೇಂದ್ರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಇಬ್ಬರೂ ಸಹ ಸಿದ್ದಲಿಂಗೇಶ್ವರ ದೇವರಿಗೆ ಒಟ್ಟಿಗೆ ಪೂಜೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular