BIG NEWS: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ; 53,720 ಕ್ಕೆ ತಲುಪಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಶುಕ್ರವಾರಕ್ಕೆ ಹೋಲಿಸಿದರೆ ಶನಿವಾರ ಕೊಂಚ ಕಡಿಮೆಯಾಗಿದೆ. ಶುಕ್ರವಾರ 11 ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಶನಿವಾರ 10,753 ಮಂದಿಗೆ ಸೋಂಕು ದೃಢಪಟ್ಟಿದೆ.

ಇನ್ನು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,720 ಕ್ಕೆ ತಲುಪಿದ್ದು, ನವದೆಹಲಿ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಲು XBB.1.16 ರೂಪಾಂತರಿ ಕಾರಣವೆಂದು ಹೇಳಲಾಗುತ್ತಿದ್ದು, ಇದು ಹೆಚ್ಚಿನ ಸಮಸ್ಯೆ ತರುವುದಿಲ್ಲವಾದರೂ ಸಾರ್ವಜನಿಕರು ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಒಳಿತು.

https://twitter.com/ANI/status/1647083296348835840

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read