HomeKarnatakaBIG NEWS: ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದ ಮುಂದೆ ಹೈಡ್ರಾಮಾ; ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ...

BIG NEWS: ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದ ಮುಂದೆ ಹೈಡ್ರಾಮಾ; ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಧಾರವಾಡ ಸೆಂಟ್ರಲ್ ಸೇರಿದಂತೆ ಕೆಲವೊಂದು ಕ್ಷೇತ್ರಗಳ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿಲ್ಲ.

ಮೂರು ತಿಂಗಳಿನಿಂದಲೂ ತಾವು ವಿಧಾನಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಕಡೆ ಕ್ಷಣದಲ್ಲಿ ಟಿಕೆಟ್ ನಿರಾಕರಿಸಿದರೆ ಹೇಗೆ ಎಂದು ಸಿಡಿದೆದ್ದಿರುವ ಜಗದೀಶ್ ಶೆಟ್ಟರ್, ಹೈಕಮಾಂಡ್ ಟಿಕೆಟ್ ನೀಡದಿದ್ದರೆ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದ ಮುಂದೆ ಹೈಡ್ರಾಮಾ ನಡೆದಿದ್ದು, ಬಿಜೆಪಿ ಕಟ್ಟಿ ಬೆಳೆಸಿದ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯೊಬ್ಬರು, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular