HomeKarnatakaBIG NEWS: ಸಾಂಕೇತಿಕವಾಗಿ ಇಂದು ಬೊಮ್ಮಾಯಿ ನಾಮಪತ್ರ; ಏಪ್ರಿಲ್ 19 ರಂದು ಕಿಚ್ಚ ಸುದೀಪ್ ಸೇರಿದಂತೆ...

BIG NEWS: ಸಾಂಕೇತಿಕವಾಗಿ ಇಂದು ಬೊಮ್ಮಾಯಿ ನಾಮಪತ್ರ; ಏಪ್ರಿಲ್ 19 ರಂದು ಕಿಚ್ಚ ಸುದೀಪ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಮತ್ತೊಮ್ಮೆ ನಾಮಿನೇಷನ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೊಮ್ಮಾಯಿ ಟೆಂಪಲ್ ರನ್ ನಡೆಸಿದ್ದಾರೆ.

ಶಿಗ್ಗಾಂವಿಯ ಪ್ರಸಿದ್ಧ ದ್ಯಾಮವ್ವ ದೇವಿಯ ದರ್ಶನ ಪಡೆದ ಅವರು, ನಂತರ ಪುತ್ರ ಭರತ್ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ಕೆಲವೇ ಮಂದಿ ಆಪ್ತರೂ ಹಾಗೂ ಬೆಂಬಲಿಗರ ಜೊತೆ ತಹಶೀಲ್ದಾರ್ ಕಚೇರಿಯಲ್ಲಿ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 19ರಂದು ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಆ ಸಂದರ್ಭದಲ್ಲಿ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಆ ಸಂದರ್ಭದಲ್ಲಿ ಖ್ಯಾತ ನಟ ಕಿಚ್ಚ ಸುದೀಪ್ ಸೇರಿದಂತೆ ಚಿತ್ರರಂಗದ ಹಲವು ತಾರೆಯರು, ಸಚಿವರು ಸಾಥ್ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

For Latest News Updates, Join Our Whatsapp Community🚩
RELATED ARTICLES

Most Popular