HomeKarnatakaBIG NEWS: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ ಎಂದ ಸಿದ್ದರಾಮಯ್ಯ

BIG NEWS: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ ಎಂದ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ನಾಯಕರು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ, ಕೆ.ಎಸ್.ಈಶ್ವರಪ್ಪ ಪಕ್ಷದ ಸಿದ್ಧಾಂತ ಎನ್ನುತ್ತಿದ್ರು. ಈಗ ಎಲ್ಲಿಗೆ ಹೋದ್ರು? ಎಂದು ಪ್ರಶ್ನಿಸಿದರು.

ಜಗದೀಶ್ ಶೆಟ್ಟರ್ ನನ್ನ ಜೊತೆ ಮಾತನಾಡಿಲ್ಲ. ಅವರು ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದರು. ಲಕ್ಷ್ಮಣ ಸವದಿ ಕಾಂಗ್ರೆಸ್ ಗೆ ಬಂದಿದ್ದರಿಂದ ಲಾಭವಾಗಿದೆ. ಅವರು ಕೇಳಿದ ಕಡೆ ಪ್ರಚಾರಕ್ಕೆ ಅವಕಾಶ ಕೊಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular