HomeKarnatakaBIG NEWS: ನನಗೆ ಕ್ಷೇತ್ರ ಇಲ್ಲ ಎನ್ನುತ್ತಿದ್ದ ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಇಲ್ಲ; ವಿಪಕ್ಷ ನಾಯಕ...

BIG NEWS: ನನಗೆ ಕ್ಷೇತ್ರ ಇಲ್ಲ ಎನ್ನುತ್ತಿದ್ದ ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ

ಕಾರವಾರ: ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಈಶ್ವರಪ್ಪನವರಿಗೆ ಇಂದು ಟಿಕೆಟ್ ಕೊಡದ ಸ್ಥಿತಿಯಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನನಗೆ ಕ್ಷೇತ್ರ ಇಲ್ಲ ಎಂದು ವ್ಯಂಗ್ಯವಾಡುತ್ತಿದ್ದ ಕೆ.ಎಸ್.ಈಶ್ವರಪ್ಪಗೆ ಇಂದು ಟಿಕೆಟ್ ಇಲ್ಲ, ಹೇಗಿದೆ ನೋಡಿ… ನನಗೆ 25 ಕ್ಷೇತ್ರಗಳಿಂದ ಸ್ಪರ್ಧೆಗೆ ಆಹ್ವಾನವಿದೆ. ಆದರೆ ಈಶ್ವರಪ್ಪನವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಹಾಗಾಗಿ ರಾಜಕೀಯ ನಿವೃತ್ತಿ ಘೋಷಿಸಿದರು. ಹಿರಿಯ ನಾಯಕರಾಗಿರುವ ಈಶ್ವರಪ್ಪನವರಿಗೆ ಪಕ್ಷ ಹೀಗೆ ಮಾಡಬಾರದಿತ್ತು. ಅವರನ್ನು ನೋಡಿದರೆ ಅಯ್ಯೋ…ಎನಿಸುತ್ತಿದೆ ಎಂದು ಹೇಳಿದರು.

ಈಶ್ವರಪ್ಪ ಅಷ್ಟೇ ಅಲ್ಲ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಯವರನ್ನೂ ನಡೆಸಿಕೊಂಡ ರೀತಿ ಸರಿಯಿಲ್ಲ. ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ. ಇಂದು ಅಥವಾ ನಾಳೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular