HomeKarnatakaBIG NEWS: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ YSV ದತ್ತಗೆ ಮತ್ತೊಂದು ಸಂಕಷ್ಟ

BIG NEWS: ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ YSV ದತ್ತಗೆ ಮತ್ತೊಂದು ಸಂಕಷ್ಟ

ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮಗೆ ಸಿಗುವ ಭರವಸೆಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್.ವಿ. ದತ್ತ ಕಾಂಗ್ರೆಸ್ ಕೈ ಕೊಡುತ್ತಿದ್ದಂತೆ ಮತ್ತೆ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

ಅಲ್ಲದೆ ಅವರಿಗೆ ಕಡೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಲಭ್ಯವಾಗಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಹೊಸ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ದತ್ತ ಅವರಿಗೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಖುದ್ದು ಹಾಜರಾತಿಯಿಂದ ತಮಗೆ ವಿನಾಯಿತಿ ನೀಡಬೇಕೆಂದು ವೈ.ಎಸ್.ವಿ. ದತ್ತ ಅರ್ಜಿ ಸಲ್ಲಿಸಿದ್ದು, ನ್ಯಾಯಾಧೀಶ ಜೆ. ಪ್ರೀತ್ ಇದನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಏಪ್ರಿಲ್ 26ರಂದು ದತ್ತ ಅವರನ್ನು ಹಾಜರುಪಡಿಸಲು ಸೂಚನೆ ನೀಡಲಾಗಿದೆ. ಸೋಮೇಗೌಡ ಎಂಬವರು ದತ್ತ ವಿರುದ್ಧ ಚೆಕ್ ಬೌನ್ಸ್ ಕುರಿತ ಖಾಸಗಿ ದೂರು ದಾಖಲಿಸಿದ್ದು, ಇದರ ವಿಚಾರಣೆ ನಡೆಯುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular