HomeKarnatakaBIG NEWS: ಡಿಕೆಶಿ ಬಣಕ್ಕೆ ಎಂ.ಬಿ.ಪಾಟೀಲ್ ಬಿಗ್ ಚೆಕ್ ಮೇಟ್; ಕಾಂಗ್ರೆಸ್ ನಲ್ಲಿ ಸಿಎಂ ರೇಸ್...

BIG NEWS: ಡಿಕೆಶಿ ಬಣಕ್ಕೆ ಎಂ.ಬಿ.ಪಾಟೀಲ್ ಬಿಗ್ ಚೆಕ್ ಮೇಟ್; ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ಗಿದೆ ಎರಡು ಸಾಲು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ನಲ್ಲಿ ಹಲವರು ಸಮರ್ಥರಿದ್ದಾರೆ. ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಕಾಂಗ್ರೆಸ್ ನ ಸಿಎಂ ಹುದ್ದೆ ಆಕಾಂಕ್ಷಿಗಳ ಪಟ್ಟಿ ಹೇಳಿದ್ದಾರೆ. ಸಿಎಂ ರೇಸ್ ನಲ್ಲಿ ಎರಡು ಸಾಲುಗಳಿವೆ ಸಿಎಂ ಹುದ್ದೆಯ ಮೊದಲ ಸಾಲಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಇದ್ದಾರೆ.

ಎರಡನೇ ಸಾಲಿನಲ್ಲಿ ನಾನು, ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್, ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಇದ್ದಾರೆ. ಮೊದಲು ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬರಬೇಕು ಆನಂತರದಲ್ಲಿ ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular