HomeKarnatakaBIG NEWS: ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ನಿಗೂಢ...!...

BIG NEWS: ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ನಿಗೂಢ…! ಕುತೂಹಲ ಕೆರಳಿಸಿದ ರಾಜಕೀಯ ನಡೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಈವರೆಗೆ 209 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದಂತಾಗಿದೆ. ಇಂದು ಬಿಡುಗಡೆಯಾದ ಪಟ್ಟಿಯಲ್ಲಿ ಬಹುತೇಕ ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ.

ಇದರ ಮಧ್ಯೆ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಇನ್ನೂ ನಿಗೂಢವಾಗಿದ್ದು, ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಮೇಲೆ ಇಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಈ ಕ್ಷೇತ್ರದಲ್ಲಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಅವರಿಗೆ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಟಿಕೆಟ್ ಗಾಗಿ ಜಗದೀಶ್ ಶೆಟ್ಟರ್ ಪಟ್ಟು ಹಿಡಿದಿದ್ದು, ಒಂದೊಮ್ಮೆ ಸ್ಪರ್ಧೆಗೆ ಅವಕಾಶ ನೀಡದಿದ್ದರೆ ಬೆಂಬಲಿಗರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಪಕ್ಷದ ಹೈಕಮಾಂಡ್ ಗೆ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಒಂದೊಮ್ಮೆ ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಅಭ್ಯರ್ಥಿಯಾಗದಿದ್ದರೆ, ಲಕ್ಷ್ಮಣ ಸವದಿಯವರನ್ನು ಕಾಂಗ್ರೆಸ್ಸಿಗೆ ಕರೆತಂದು ಟಿಕೆಟ್ ನೀಡಿದಂತೆ ಜಗದೀಶ್ ಶೆಟ್ಟರ್ ಅವರಿಗೂ ಅವಕಾಶ ಕಲ್ಪಿಸಿಕೊಡಲಾಗುತ್ತದಾ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular