HomeKarnatakaBIG NEWS: 'ಕೈ' ತಪ್ಪಿದ ಟಿಕೆಟ್; ಬಿಕ್ಕಿ ಬಿಕ್ಕಿ ಅತ್ತ ಗೋಪಿಕೃಷ್ಣ

BIG NEWS: ‘ಕೈ’ ತಪ್ಪಿದ ಟಿಕೆಟ್; ಬಿಕ್ಕಿ ಬಿಕ್ಕಿ ಅತ್ತ ಗೋಪಿಕೃಷ್ಣ

ತುಮಕೂರು: ವಿಧಾನಸಭಾ ಚುನವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು, ಟಿಕೆಟ್ ವಂಚಿತ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತರೀಕೆರೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಇದರಿಂದ ನೊಂದ ಗೋಪಿಕೃಷ್ಣ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ತರೀಕೆರೆ ಕ್ಷೇತ್ರದಿಂದ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ. ಇದರಿಂದ ಗೋಪಿಕೃಷ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಸಿದ್ದರಾಮಯ್ಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular