
ಶಿರಸಿಯಲ್ಲಿ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಸಲ್ಲಿಸಲಿರುವ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್ ಬೈ ಹೇಳಲಿದ್ದಾರೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕರೊಬ್ಬರು ಪಕ್ಷ ಬಿಟ್ಟಂತಾಗುತ್ತದೆ.
ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ಬಿಜೆಪಿ ಹೈಕಮಾಂಡ್ ಕೊನೆ ಕ್ಷಣದವರೆಗೂ ಪ್ರಯತ್ನ ನಡೆಸಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಿಜೆಪಿ ತೊರೆಯಲಿರುವ ಜಗದೀಶ್ ಶೆಟ್ಟರ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಆದರೆ ಯಾವ ಪಕ್ಷದಿಂದ ಎಂಬ ಗುಟ್ಟು ಬಿಟ್ಟು ಕೊಟ್ಟಿಲ್ಲ.

