HomeKarnatakaBIG NEWS: ಬಿಜೆಪಿ ಗೆ ರಾಜೀನಾಮೆ ನೀಡುತ್ತೇನೆ; ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತ ಎಂದ ಮಾಜಿ ಸಿಎಂ...

BIG NEWS: ಬಿಜೆಪಿ ಗೆ ರಾಜೀನಾಮೆ ನೀಡುತ್ತೇನೆ; ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುವುದು ಅನುಮಾನವಾಗಿದ್ದು, ವರಿಷ್ಠರ ಮನವೊಲಿಕೆಗೂ ಬಗ್ಗದ ಜಗದೀಶ್ ಶೆಟ್ಟರ್, ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯತ್ತ ಪ್ರಯಾಣ ಬೆಳೆಸಿರುವ ಜಗದೀಶ್ ಶೆಟ್ಟರ್, ಸುದ್ದಿಗಾರರೊಂದಿಗೆ ಮಾತನಾಡಿ, ಸ್ಪೀಕರ್ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ಹೋಗುತ್ತಿದ್ದೇನೆ ಎಂದರು.

ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸೇರಿ ಎಲ್ಲಾ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತ. ಸ್ಪೀಕರ್ ಭೇಟಿಯಾಗಿ ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಗೆ ವಾಪಸ್ ಆಗುತ್ತೇನೆ. ಈವರೆಗೆ ಕಾಂಗ್ರೆಸ್ ನಾಯಕರು ನನ್ನನ್ನು ಭೇಟಿಯಾಗಿಲ್ಲ, ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಮಾಡುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular