HomeKarnatakaಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಎಸ್.ಆರ್. ಪಾಟೀಲ್ ಗೆ ಶಾಕ್

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ ಎಸ್.ಆರ್. ಪಾಟೀಲ್ ಗೆ ಶಾಕ್

ಬಾಗಲಕೋಟೆ: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಪಾಟೀಲ್ ಅವರಿಗೆ ಟಿಕೆಟ್ ಕೈತಪ್ಪಿದೆ.

ಬಾಗಲಕೋಟೆ ಜಿಲ್ಲೆಯ ಸ್ವಕ್ಷೇತ್ರ ಬೀಳಗಿ ಹಾಗೂ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಆರ್. ಪಾಟೀಲ್ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿಯಾಗಿದ್ದಾರೆ. ಹಿರಿಯ ನಾಯಕರಾದ ಅವರನ್ನು ನಿರ್ಲಕ್ಷಿಸಿರುವುದು ಬೆಂಬಲಿಗರಲ್ಲಿ ಬೇಸರ ತರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಬಿಡುಗಡೆ ಮಾಡಿದ ಎರಡನೇ ಪಟ್ಟಿಯಲ್ಲಿ ಬೀಳಗಿಯಿಂದ ಜೆ.ಟಿ. ಪಾಟೀಲ್, ಮೂರನೇ ಪಟ್ಟಿಯಲ್ಲಿ ದೇವರಹಿಪ್ಪರಗಿಯಿಂದ ಶರಣಪ್ಪ ಸುಣಗಾರ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದೆ. ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಆರ್. ಪಾಟೀಲ್ ಕಾಂಗ್ರೆಸ್ ಟಿಕೆಟ್ ನಿಂದ ವಂಚಿತರಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಎಸ್.ಆರ್. ಪಾಟೀಲ್ ಘೋಷಣೆ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular