HomeKarnatakaBIG NEWS: ಮೋದಿ, ಅಮಿತ್ ಶಾಗೆ ಗ್ರೌಂಡ್ ರಿಪೋರ್ಟ್ ಗೊತ್ತಿಲ್ಲ; ಶೆಟ್ಟರ್ ವಾಗ್ದಾಳಿ

BIG NEWS: ಮೋದಿ, ಅಮಿತ್ ಶಾಗೆ ಗ್ರೌಂಡ್ ರಿಪೋರ್ಟ್ ಗೊತ್ತಿಲ್ಲ; ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೈತಪ್ಪುವುದು ಖಚಿತವಾಗುತ್ತಿದ್ದಂತೆ ವರಿಷ್ಠರ ಮನವೊಲಿಕೆಗೂ ಬಗ್ಗದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿ, ಅಮಿತ್ ಶಾ ಅವರಿಗೆ ಗ್ರೌಂಡ್ ರಿಪೋರ್ಟ್ ಗೊತ್ತಿಲ್ಲ ಎಂದು ಗುಡುಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲ್ಲಿರುವ ಉಸ್ತುವಾರಿಗಳು ಹಾಗೂ ಇಲ್ಲಿನ ನಾಯಕರು ಬಿಜೆಪಿ ಅಧಿಕಾರಕ್ಕೆ ತರೋದು ಬೇಡ ಅನ್ನೋ ನಿರ್ಧಾರ ಮಾಡಿದ್ದಾರೆ ಅನ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಹಿರಿಯರಿಗೆ ಗೌರವ ಕೊಡದೇ ಇರುವುದು, ಕೀಳಾಗಿ ನೋಡುವುದು. ಇದು ಬಿಜೆಪಿಗೆ ಮುಳುವಾಗಲಿದೆ. ನಾನು ಇದನ್ನು ಪ್ರಧಾನಿ ಮೋದಿ ಗಮನಕ್ಕೆ ತರುವ ಯತ್ನ ಮಾಡಲ್ಲ, ಅವರಾಗಿಯೇ ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular