HomeKarnatakaBIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಿಎಂ...

BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಶಾಸಕ ಸ್ಥಾನಕ್ಕೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೀನಾಮೆ ಬಳಿಕ ಹುಬ್ಬಳ್ಳಿ ಗೆ ತೆರಳಲಿರುವ ಜಗದೀಶ್ ಶೆಟ್ಟರ್ ಬೆಂಬಲಿಗರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular