ಕಾಂಗ್ರೆಸ್ ಗೆ ಬಿಗ್ ಶಾಕ್; ಜೆಡಿಎಸ್ ಸೇರ್ಪಡೆಯಾದ ಡಾ. ದೇವರಾಜ್ ಪಾಟೀಲ್

ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡಿರುವ ಡಾ. ದೇವರಾಜ್ ಪಾಟೀಲ್ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.  ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾದ ದೇವರಾಜ್ ಪಾಟೀಲ್, ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬಿಡಬೇಕು ಎಂಬ ವಿಚಾರ ಇರಲಿಲ್ಲ. ಆದರೆ ನನ್ನ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರಲ್ಲಿ ಅಭಿಪ್ರಾಯ ಸರಿ ಇಲ್ಲ. ನನ್ನ ಬಗ್ಗೆ ಮಾತನಾಡಿದ್ದಕ್ಕೆ ಮನನೊಂದು ಪಕ್ಷ ತೊರೆದಿದ್ದೇನೆ ಎಂದು ಹೇಳಿದರು.

ಬಾದಾಮಿಯಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಜೆಡಿಎಸ್ ನಿಂದ ನಾನು ಸ್ಪರ್ಧಿಸಿ ಜನರಿಗೆ ಒಂದು ಹೊಸ ಅವಕಾಶ ಕಲ್ಪಿಸಿದ್ದೇನೆ. ಹೊಸತನ, ಸ್ವಾಭಿಮಾನ, ರೈತರ ಪರವಾದ, ಉದ್ಯೋಗಾವಕಾಶ, ಗ್ರಾಮೀಣ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮತ ಕೇಳುತ್ತೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read