alex Certify ಮೆಟ್ರೋ ಲಿಫ್ಟ್​ನಲ್ಲಿ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ: ಯುವಕ ಅರೆಸ್ಟ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಲಿಫ್ಟ್​ನಲ್ಲಿ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ: ಯುವಕ ಅರೆಸ್ಟ್​

ನವದೆಹಲಿ: ಏಪ್ರಿಲ್ 4 ರಂದು ದೆಹಲಿ ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ 26 ವರ್ಷದ ಯುವಕನನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಆರೋಪಿ ರಾಜೇಶ್ ಕುಮಾರ್ ದಕ್ಷಿಣ ದೆಹಲಿಯ ಜಸೋಲಾ ಮೆಟ್ರೋ ಸ್ಟೇಷನ್‌ನಲ್ಲಿ ಲಿಫ್ಟ್‌ನಲ್ಲಿ ತನ್ನ ಖಾಸಗಿ ಅಂಗಗಳನ್ನು ಬಹಿರಂಗಪಡಿಸಿ ಮಹಿಳೆಯನ್ನು ಸ್ಪರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಭದ್ರತಾ ಕ್ಯಾಮರಾ ದೃಶ್ಯಾವಳಿ ಮತ್ತು ಸ್ಥಳೀಯ ಗುಪ್ತಚರ ಸಹಾಯದಿಂದ ರಾಜೇಶ್ ಸಿಕ್ಕಿಬಿದ್ದಿದ್ದಾನೆ. ವೃತ್ತಿಯಲ್ಲಿ ಆರ್ಕಿಟೆಕ್ಟ್ ಆಗಿದ್ದ ಮಹಿಳೆ ಆತನ ಕೃತ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ರಾಜೇಶ್ ಮೆಟ್ರೋ ರೈಲು ಹತ್ತದೆ ಓಡಿ ಹೋಗಿದ್ದಾನೆ. ದೆಹಲಿ ಮೆಟ್ರೋ ಪೊಲೀಸರು ಕಿರುಕುಳಕ್ಕೆ ಸಂಬಂಧಿಸಿದ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...