![](https://kannadadunia.com/wp-content/uploads/2023/04/8bb5a3d0-7e2a-4919-a90c-7714361c5e66.jpg)
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್ ಸ್ಟರ್, ರಾಜಕಾರಣಿ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಪತ್ರಕರ್ತರ ಸೋಗಿನಲ್ಲಿ ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (ಎಸ್ ಓ ಪಿ) ಗಳನ್ನು ಸಿದ್ಧಪಡಿಸಲು ಕೇಂದ್ರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (MHA), ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP) ಸಿದ್ಧಪಡಿಸುತ್ತದೆ ಎಂದು ತಿಳಿದುಬಂದಿದೆ
ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ನನ್ನು ಹತ್ಯೆ ಮಾಡಿದ ಘಟನೆ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯುತ್ತಿದ್ದಾಗ ಮಾಧ್ಯಮ ಸಂವಾದದ ಮಧ್ಯದಲ್ಲಿ ಪತ್ರಕರ್ತರಂತೆ ನಟಿಸುತ್ತಿದ್ದ ಮೂವರು ಗ್ಯಾಂಗ್ ಸ್ಟರ್ ರಾಜಕಾರಣಿ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ರನ್ನ ಗುಂಡಿಕ್ಕಿ ಕೊಂದಿದ್ದರು.