ಬೆಂಗಳೂರು: ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾದ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಬಿಡುಗಡೆ ಮಾಡಿದ ಮೂರನೇ ಪಟ್ಟಿಯಲ್ಲೂ ಟಿಕೆಟ್ ಘೋಷಣೆ ಮಾಡದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಅವರು ರಾಜೀನಾಮೆ ಸಲ್ಲಿಸಿದ್ದು, ಶೀಘ್ರದಲ್ಲೇ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ.