ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಅವರು ಟಿಕೆಟ್ ಖಚಿತಪಡಿಸಿಕೊಂಡೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್ ನಮ್ಮ ಬೀಗರು, ನಾನು ಅವರೊಂದಿಗೆ ಇದುವರೆಗೂ ಮಾತನಾಡಿಲ್ಲ. ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೆ ಟಿಕೆಟ್ ನೀಡದೇ ಇರಲು ಆಗುವುದಿಲ್ಲ. ಪಕ್ಷದ ವರಿಷ್ಠರು ಈಗಾಗಲೇ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.
ನಿನ್ನೆ ಶಿರಸಿಯಲ್ಲಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ರಾತ್ರಿ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅವರು ಇಂದು ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.