BIG BREAKING: ಬಿಜೆಪಿ ಜೊತೆಗಿನ 4 ದಶಕಗಳ ನಂಟು ಕಡಿದುಕೊಂಡ ಶೆಟ್ಟರ್; ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಾಲ್ಕು ದಶಕಗಳ ಬಿಜೆಪಿ ನಂಟು ಕಡಿದುಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಎಂ ಬಿ ಪಾಟೀಲ್ ಮೊದಲಾದವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೊಂಡರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನ. ತಮ್ಮ ಅಧಿಕಾರದ ಅವಧಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕಾರ್ಯ ನಿರ್ವಹಿಸಿದ್ದ ಜಗದೀಶ್ ಶೆಟ್ಟರ್ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಬಣ್ಣಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read