HomeKarnatakaBIG NEWS: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ದುರದೃಷ್ಟಕರ ಎಂದ ಸಿ.ಟಿ.ರವಿ

BIG NEWS: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ದುರದೃಷ್ಟಕರ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ದುರದೃಷ್ಟಕರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಒಬ್ಬ ವ್ಯಕ್ತಿಗೆ ಒಂದು ಪಕ್ಷ ಏನೆಲ್ಲ ಸ್ಥಾನ ನೀಡಬಹುದು ಅದೆಲ್ಲವನ್ನೂ ಬಿಜೆಪಿ ಕೊಟ್ಟಿದೆ. ಆದರೂ ಜಗದೀಶ್ ಶೆಟ್ಟರ್ ಪಕ್ಷ ತೊರೆದು ಯಾವ ಮೆಸೇಜ್ ನೀಡಿದರು? ಎಂದು ಪ್ರಶ್ನಿಸಿದ್ದಾರೆ.

ಹಾಗಾದರೆ ಸೈದ್ಧಾಂತಿಕವಾಗಿ ಜಗದೀಶ್ ಶೆಟ್ಟರ್ ಬಿಜೆಪಿ ಜೊತೆ ಇರಲಿಲ್ಲವೇ? ವೈಯಕ್ತಿಕ ಲಾಭ ನಷ್ಟದ ಲೆಕ್ಕಾಚಾರ ಹಾಕಿ ನನಗೆ ಲಾಭವಾದರೆ ಮಾತ್ರ ಬಿಜೆಪಿ, ಇಲ್ಲವಾದರೆ ಬಿಜೆಪಿ ಅಲ್ಲ ಎಂಬ ಮನಃ ಸ್ಥಿತಿ ಆಶ್ಚರ್ಯ ತರಿಸಿದೆ. ಜಗದೀಶ್ ಶೆಟ್ಟರ್ ಅವರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular